Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:9 - ಕನ್ನಡ ಸತ್ಯವೇದವು J.V. (BSI)

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:9
26 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.


ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.


ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೇನು.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವದು.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು; ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು