Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:16 - ಕನ್ನಡ ಸತ್ಯವೇದವು J.V. (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:16
12 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು; ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.


ವಿವೇಕಿಯ ಹೃದಯ ಜ್ಞಾನಾಶ್ರಯ; ಜ್ಞಾನಹೀನನ ಒಳಗುಟ್ಟು ರಟ್ಟು.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು; ಸುಳ್ಳು ಸಾಕ್ಷಿಯು ಅಸತ್ಯಮಾಡುವನು.


ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು