Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:17 - ಕನ್ನಡ ಸತ್ಯವೇದವು J.V. (BSI)

17 ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು; ಸುಳ್ಳು ಸಾಕ್ಷಿಯು ಅಸತ್ಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:17
15 ತಿಳಿವುಗಳ ಹೋಲಿಕೆ  

ಸತ್ಯಸಾಕ್ಷಿಯು ಪ್ರಾಣರಕ್ಷಕ; ಸುಳ್ಳುಸಾಕ್ಷಿಯು ವಂಚಕ.


ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?


ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಸುಳ್ಳುಸಾಕ್ಷಿಯು ಅಳಿದುಹೋಗುವದು; ಕೇಳಿದ್ದದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವದು.


ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ.


ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು