Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:19 - ಕನ್ನಡ ಸತ್ಯವೇದವು J.V. (BSI)

19 ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:19
10 ತಿಳಿವುಗಳ ಹೋಲಿಕೆ  

ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು