Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:20 - ಕನ್ನಡ ಸತ್ಯವೇದವು J.V. (BSI)

20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:20
16 ತಿಳಿವುಗಳ ಹೋಲಿಕೆ  

ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.


ಕೆಡುಕರ ಕೊಳ್ಳೆ ದುಷ್ಟರಿಗೆ ಇಷ್ಟ; ಶಿಷ್ಟರ ಬುಡ ಫಲದಾಯಕ.


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದದರಿಂದ ಇವನು ಯೆಹೋವನಿಗೆ ವಿರುದ್ಧವಾಗಿ ನಡೆದನು.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು; ದುರ್ಜನರಿಗೆ ಕೇಡು ತುಂಬಿತುಳುಕುವದು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ; ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು