Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:21 - ಕನ್ನಡ ಸತ್ಯವೇದವು J.V. (BSI)

21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು; ದುರ್ಜನರಿಗೆ ಕೇಡು ತುಂಬಿತುಳುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:21
17 ತಿಳಿವುಗಳ ಹೋಲಿಕೆ  

ನೀವು ಒಳ್ಳೇದನ್ನೇ ಮಾಡುವದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.


ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.


ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.


ಆಜ್ಞೆಯನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸನು; ಕಾಲವೂ ನ್ಯಾಯತೀರ್ಪೂ ಉಂಟೆಂಬದು ಜ್ಞಾನಿಯ ಬುದ್ಧಿಗೆ ಗೊತ್ತು;


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು; ಅದರಿಂದಲೂ ಕೈದೆಗೆಯಬೇಡ; ದೇವರಲ್ಲಿ ಭಯಭಕ್ತಿಯುಳ್ಳವನು ಇವೆರಡರಿಂದಲೂ ಪಾರಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು