Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:1 - ಕನ್ನಡ ಸತ್ಯವೇದವು J.V. (BSI)

1 ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:1
13 ತಿಳಿವುಗಳ ಹೋಲಿಕೆ  

ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.


ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು.


ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು.


ಈಗ, ಕಂದಾ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳನ್ನು ಆಲಿಸು.


ಮೂರ್ಖನ ನಡತೆ ಅವನ ಗಣನೆಗೆ ಸರಿ; ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು