Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:12 - ಕನ್ನಡ ಸತ್ಯವೇದವು J.V. (BSI)

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:12
20 ತಿಳಿವುಗಳ ಹೋಲಿಕೆ  

ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವದು ಮೂಢರಿಗೆ ಕಹಿ.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಇಸ್ರಾಯೇಲನು ಯೋಸೇಫನಿಗೆ - ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳುಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು.


[ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು.


ಅರಸನು ನನಗೆ - ನೀನು ಕಳೆಗುಂದಿದವನಾಗಿ ಕಾಣುವದೇಕೆ? ನಿನಗೆ ದೇಹಾಲಸ್ಯವಿಲ್ಲವಲ್ಲಾ; ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣವಲ್ಲ ಎಂದು ಹೇಳಲು ನನಗೆ ಮಹಾಭೀತಿಯುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು