Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:24 - ಕನ್ನಡ ಸತ್ಯವೇದವು J.V. (BSI)

24 ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:24
10 ತಿಳಿವುಗಳ ಹೋಲಿಕೆ  

ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು