Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:6 - ಕನ್ನಡ ಸತ್ಯವೇದವು J.V. (BSI)

6 ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:6
14 ತಿಳಿವುಗಳ ಹೋಲಿಕೆ  

ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.


ಧರ್ಮಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆತಂದು ಅಧರ್ಮಿಗಳನ್ನು ಕೆಡವಿ ಕೇಡಿಗೆ ದೊಬ್ಬುವನು.


ಚಾಡಿಗಾರನು ದೇಶದಲ್ಲಿ ಉಳಿಯನು; ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವದು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.


ವಕ್ರಹೃದಯರು ಯೆಹೋವನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ದಯೆಗೆ ಆಸ್ಪದರು.


ಅವನು - ಅದೋನೀಯನು ಸತ್ಪುರುಷನಾಗಿ ನಡೆಯುವದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ; ಅವನಲ್ಲಿ ಕೆಟ್ಟತನವು ಕಂಡುಬರುವದಾದರೆ ಅವನು ಸಾಯುವನು ಎಂದು ಹೇಳಿ


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು