Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:1 - ಕನ್ನಡ ಸತ್ಯವೇದವು J.V. (BSI)

1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:1
10 ತಿಳಿವುಗಳ ಹೋಲಿಕೆ  

ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.


ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ ಕಾಡಿನ ವಾಸವೇ ಲೇಸು.


ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು