Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:10 - ಕನ್ನಡ ಸತ್ಯವೇದವು J.V. (BSI)

10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:10
20 ತಿಳಿವುಗಳ ಹೋಲಿಕೆ  

ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?


ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ.


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.


ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು