Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:14 - ಕನ್ನಡ ಸತ್ಯವೇದವು J.V. (BSI)

14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:14
20 ತಿಳಿವುಗಳ ಹೋಲಿಕೆ  

ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಬಾಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನನುಭವಿಸುವನು; ಅವನ ಕೈಕೆಲಸದ ಫಲವು ಅವನಿಗೇ ಪ್ರಾಪ್ತವಾಗುವದು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರಿಶೋಧಿಸಲಿ; ಆಗ ಅವನು ತನ್ನ ನಿವಿುತ್ತದಿಂದ ಹೆಚ್ಚಳಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬರ ನಿವಿುತ್ತದಿಂದಾಗುವದಿಲ್ಲ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ಶಪಿಸುವದು ಇಷ್ಟವಾಗಿದ್ದದರಿಂದ ಅದು ಅವನಿಗೆ ಬಂತು; ಆಶೀರ್ವದಿಸುವದು ಇಷ್ಟವಲ್ಲದ್ದರಿಂದ ಅದು ಅವನಿಗೆ ದೂರವಾಯಿತು.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.


ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು; ದುರ್ಜನರಿಗೆ ಕೇಡು ತುಂಬಿತುಳುಕುವದು.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಮನುಷ್ಯನು ತನ್ನ ಬಾಯ ಬೆಳೆಯನ್ನು ಹೊಟ್ಟೆತುಂಬಾ ಉಣ್ಣುವನು; ತನ್ನ ತುಟಿಗಳ ಫಲವನ್ನು ಸಾಕಾದಷ್ಟು ತಿನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು