Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:18 - ಕನ್ನಡ ಸತ್ಯವೇದವು J.V. (BSI)

18 ಮೂರ್ಖರಿಗೆ ಮೂರ್ಖತನವೇ ಸ್ವಾಸ್ತ್ಯ; ಜಾಣರಿಗೆ ಜ್ಞಾನವೇ ಮುಕುಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಡ್ಡರ ಸೊತ್ತು ಮೂಢತನ; ಜಾಣರಿಗೆ ಜ್ಞಾನವೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:18
12 ತಿಳಿವುಗಳ ಹೋಲಿಕೆ  

ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು; ಜ್ಞಾನಹೀನರಿಗಾಗುವ ಬಹುಮಾನವೋ ಅವಮಾನವೇ.


ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ಕೆಟ್ಟವರು ಒಳ್ಳೆಯವರಿಗೆ ಬಾಗುವರು; ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು