Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:27 - ಕನ್ನಡ ಸತ್ಯವೇದವು J.V. (BSI)

27 ಯೆಹೋವನ ಭಯ ಜೀವದ ಬುಗ್ಗೆ; ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:27
11 ತಿಳಿವುಗಳ ಹೋಲಿಕೆ  

ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ ಉರುಲುಗಳೂ ತುಂಬಿವೆ; ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.


ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು.


ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.


ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು