Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:30 - ಕನ್ನಡ ಸತ್ಯವೇದವು J.V. (BSI)

30 ಶಾಂತಿಗುಣವು ದೇಹಕ್ಕೆ ಜೀವಾಧಾರವು; ಕ್ರೋಧವು ಎಲುಬಿಗೆ ಕ್ಷಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:30
14 ತಿಳಿವುಗಳ ಹೋಲಿಕೆ  

ಹರ್ಷಹೃದಯವು ಒಳ್ಳೇ ಔಷಧ, ಕುಗ್ಗಿದ ಮನದಿಂದ ಒಣಮೈ.


ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಉಂಟಾಗುವವು.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ನಾನು ಇಜ್ರೇಲಿನವನಾದ ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂಬದಾಗಿ ಹೇಳಿದೆನು; ಆದರೆ ಅವನು ಕೊಡುವದಿಲ್ಲ ಅಂದನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು