Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:35 - ಕನ್ನಡ ಸತ್ಯವೇದವು J.V. (BSI)

35 ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:35
18 ತಿಳಿವುಗಳ ಹೋಲಿಕೆ  

ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಹೃದಯಶುದ್ಧಿಯನ್ನಪೇಕ್ಷಿಸುವ ಸವಿಮಾತಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವದು.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.


ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ ಅವರನ್ನು ತೂರಿಬಿಡುವನು.


ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;


ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.


ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು; ಯಥಾರ್ಥವಾದಿಯನ್ನು ಪ್ರೀತಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು