Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:6 - ಕನ್ನಡ ಸತ್ಯವೇದವು J.V. (BSI)

6 ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:6
24 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ.


ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ ತಿಳುವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ.


ವಿವೇಕಿಗೆ ಜ್ಞಾನವೇ ಗುರಿಯಾಗಿರುವದು; ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವದು.


ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳುವಳಿಕೆಯನ್ನೂ ಕಾಣಲಾರೆ.


ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ ವಕ್ರತೆಯೂ ಇಲ್ಲ.


ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು