Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:1 - ಕನ್ನಡ ಸತ್ಯವೇದವು J.V. (BSI)

1 ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:1
16 ತಿಳಿವುಗಳ ಹೋಲಿಕೆ  

ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಅವರು ಅವನಿಗೆ - ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ ಅವರಿಗೆ ಒಳಗಾಗಿ ಒಳ್ಳೇ ಉತ್ತರಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.


ಅವರು ಅವನಿಗೆ - ನೀನು ಈ ಜನರಿಗೆ ದಯತೋರಿಸಿ ಅವರನ್ನು ಮೆಚ್ಚಿಸುವ ಒಳ್ಳೇ ಉತ್ತರ ಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.


ಅದು ನಿನಗೆ ಬಹಳವಾಗಿ ವಿಜ್ಞಾಪಿಸುವದೋ? ನಿನ್ನ ಸಂಗಡ ಸವಿಮಾತಾಡೀತೇ?


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು; ಜ್ಞಾನಿಗಳೋ ರೋಷಾಗ್ನಿಯನ್ನಾರಿಸುವರು.


ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು