Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:15 - ಕನ್ನಡ ಸತ್ಯವೇದವು J.V. (BSI)

15 ದೀನನ ದಿನಗಳೆಲ್ಲಾ ದುಃಖಭರಿತ; ಹರ್ಷಹೃದಯನಿಗೆ ನಿತ್ಯವೂ ಔತಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:15
17 ತಿಳಿವುಗಳ ಹೋಲಿಕೆ  

ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.


ಹರ್ಷಹೃದಯವು ಒಳ್ಳೇ ಔಷಧ, ಕುಗ್ಗಿದ ಮನದಿಂದ ಒಣಮೈ.


ಇಷ್ಟು ಮಾತ್ರವೇ ಅಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಮಾಧಾನಸ್ಥಿತಿ ಹೊಂದಿದವರಾಗಿ ಆತನ ಮುಖಾಂತರ ದೇವರಲ್ಲಿ ಹರ್ಷಗೊಳ್ಳುತ್ತೇವೆ.


ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು