Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:20 - ಕನ್ನಡ ಸತ್ಯವೇದವು J.V. (BSI)

20 ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:20
14 ತಿಳಿವುಗಳ ಹೋಲಿಕೆ  

ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.


ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.


ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು