Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:24 - ಕನ್ನಡ ಸತ್ಯವೇದವು J.V. (BSI)

24 ವಿವೇಕಿಗೆ ಜೀವದ ಮಾರ್ಗವು ಮೇಲು ಮೇಲಕ್ಕೆ ಹೋಗುತ್ತದೆ; ಅದನ್ನು ಹಿಡಿದವನು ಪಾತಾಳದಿಂದ ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:24
15 ತಿಳಿವುಗಳ ಹೋಲಿಕೆ  

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಮತ್ತು ಈ ಜನರಿಗೆ ಹೀಗೆ ಹೇಳು ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಜೀವಿಸುವ ಮಾರ್ಗವನ್ನೂ ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಬೆತ್ತದಿಂದ ಹೊಡೆ; ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು. ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.


ಅವಳ ಮನೆಯೇ ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ನಾನು ಕೇಡಿನ ಮಾರ್ಗದಲ್ಲಿರುತ್ತೇನೋ ಏನೋ ನೋಡಿ ಸನಾತನಮಾರ್ಗದಲ್ಲಿ ನನ್ನನ್ನು ನಡಿಸು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು