Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:25 - ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:25
20 ತಿಳಿವುಗಳ ಹೋಲಿಕೆ  

ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.


ಪೂರ್ವಕಾಲದ ಮೇರೆಯನ್ನು ಒತ್ತಬೇಡ; ಅನಾಥರ ಹೊಲಗಳಲ್ಲಿ ನುಗ್ಗದಿರು.


ದುಷ್ಟರ ಮನೆಗೆ ನಾಶನ; ಶಿಷ್ಟರ ಗುಡಾರಕ್ಕೆ ಏಳಿಗೆ.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು.


ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು.


ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.


ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ].


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು