Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:3
13 ತಿಳಿವುಗಳ ಹೋಲಿಕೆ  

ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದು ಅಂದುಕೊಳ್ಳುತ್ತಿದ್ದೆನು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಆತನೊಬ್ಬನೇ ಭೂವಿುಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು