Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:31 - ಕನ್ನಡ ಸತ್ಯವೇದವು J.V. (BSI)

31 ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು ಜ್ಞಾನಿಗಳ ನಡುವೆ ನೆಲೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:31
14 ತಿಳಿವುಗಳ ಹೋಲಿಕೆ  

ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ.


ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.


ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು