Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:33 - ಕನ್ನಡ ಸತ್ಯವೇದವು J.V. (BSI)

33 ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:33
16 ತಿಳಿವುಗಳ ಹೋಲಿಕೆ  

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಇವುಗಳಿಂದ ಜನರು ಜ್ಞಾನವನ್ನೂ ಶಿಕ್ಷೆಯನ್ನೂ ಪಡೆದು ಬುದ್ಧಿವಾದಗಳನ್ನು ಗ್ರಹಿಸಿ


ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ಹೃದಯದ ಸಂಕಲ್ಪವು ಮನುಷ್ಯನ ವಶವು; ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವದು.


ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು