Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:4 - ಕನ್ನಡ ಸತ್ಯವೇದವು J.V. (BSI)

4 ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:4
15 ತಿಳಿವುಗಳ ಹೋಲಿಕೆ  

ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ಸವಿನುಡಿಯು ಜೇನುಕೊಡ; ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಹೊಟ್ಟೆಯೊಳಕ್ಕೇ ಇಳಿಯುವವು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಇವು ಹೊಟ್ಟೆಯೊಳಕ್ಕೇ ಇಳಿಯುವವು.


ನಾನು ಬಡವನೂ ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಶಿಷ್ಟನ ಬಾಯಿ ಜೀವದ ಬುಗ್ಗೆ; ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು