Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:6 - ಕನ್ನಡ ಸತ್ಯವೇದವು J.V. (BSI)

6 ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ; ದುಷ್ಟನ ಆದಾಯವು ಕಳವಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀತಿವಂತನ ಮನೆಯೊಳು ನಿಧಿನಿಕ್ಷೇಪ; ಅನೀತಿವಂತನ ಆದಾಯ ದುಃಖತಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೋ ಆಪತ್ತನ್ನು ಬರಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:6
16 ತಿಳಿವುಗಳ ಹೋಲಿಕೆ  

ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ದೊರಕಿಸಿ ಅವರ ಬೊಕ್ಕಸಗಳನ್ನು ತುಂಬಿಸುವೆನು.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


ಗಾಳಿಯನ್ನು ಹಿಂದಟ್ಟುವ ವ್ಯರ್ಥ ಪ್ರಯಾಸದ ಬೊಗಸೆಗಿಂತಲೂ ನೆಮ್ಮದಿಯ ಸೇರೆಯೇ ಲೇಸು.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ; ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು