Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:16 - ಕನ್ನಡ ಸತ್ಯವೇದವು J.V. (BSI)

16 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:16
13 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ; ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.


ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.


ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.


ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಓರೆಯಾಗಬೇಡ.


ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು;


ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು