Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:17 - ಕನ್ನಡ ಸತ್ಯವೇದವು J.V. (BSI)

17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ; ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:17
16 ತಿಳಿವುಗಳ ಹೋಲಿಕೆ  

ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ತನ್ನ ಬಾಯನ್ನೂ ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.


ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ ಉರುಲುಗಳೂ ತುಂಬಿವೆ; ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು