Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:23 - ಕನ್ನಡ ಸತ್ಯವೇದವು J.V. (BSI)

23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:23
12 ತಿಳಿವುಗಳ ಹೋಲಿಕೆ  

ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.


ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?


ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.


ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು