Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:13 - ಕನ್ನಡ ಸತ್ಯವೇದವು J.V. (BSI)

13 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:13
18 ತಿಳಿವುಗಳ ಹೋಲಿಕೆ  

ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.


ಇದಲ್ಲದೆ ಅವನು ದಾವೀದನಿಗೆ - ನೀನು ನನಗಿಂತ ನೀತಿವಂತನು; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೇದನ್ನೇ ಮಾಡಿದಿ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.


ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ನನಗೆ ಕೋಪವನ್ನೆಬ್ಬಿಸಿದದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವದು ಅನ್ನುತ್ತಾನೆ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು