Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:17 - ಕನ್ನಡ ಸತ್ಯವೇದವು J.V. (BSI)

17 ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:17
16 ತಿಳಿವುಗಳ ಹೋಲಿಕೆ  

ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.


ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣ ಮಾಡಿಸಿದನು.


ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.


ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -


ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.


ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ಆದದರಿಂದ ಅವನು ದಾವೀದನಿಗೆ - ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಪ್ತಸ್ಥಳದಲ್ಲಿ ಅಡಗಿಕೊಂಡಿರು.


ಅದಕ್ಕೆ ಇತ್ತೈ - ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಜೀವಹೋದರೂ ಉಳಿದರೂ ನನ್ನ ಒಡೆಯನಾದ ಅರಸನಿರುವಲ್ಲಿಗೆ ಹೋಗುವೆನು ಎಂದು ಉತ್ತರಕೊಟ್ಟನು.


ನೀನು ಅಡಗಿಕೊಂಡಿರುವ ಹೊಲಕ್ಕೆ ನಾನೂ ಬಂದು ನನ್ನ ತಂದೆಯ ಬಳಿಯಲ್ಲಿ ನಿಂತು ನಿನ್ನ ವಿಷಯ ಅವನೊಡನೆ ಮಾತಾಡಿ ಗೊತ್ತಾಗುವದನ್ನು ನಿನಗೆ ತಿಳಿಸುವೆನು ಎಂದು ಹೇಳಿದನು.


ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ.


ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು