Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:21 - ಕನ್ನಡ ಸತ್ಯವೇದವು J.V. (BSI)

21 ಹೆಡ್ಡನನ್ನು ಹೆತ್ತವನಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೆಡ್ಡನನ್ನು ಹೆತ್ತವನಿಗೆ ವ್ಯಥೆ; ಮೂರ್ಖನ ತಂದೆಗೆ ಕಡುಚಿಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೂಢಮಗನನ್ನು ಪಡೆದಿರುವ ತಂದೆಗೆ ಬಹು ವ್ಯಥೆ. ಅವನ ತಂದೆಯು ಸಂತೋಷದಿಂದರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:21
12 ತಿಳಿವುಗಳ ಹೋಲಿಕೆ  

ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು