Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:22 - ಕನ್ನಡ ಸತ್ಯವೇದವು J.V. (BSI)

22 ಹರ್ಷಹೃದಯವು ಒಳ್ಳೇ ಔಷಧ, ಕುಗ್ಗಿದ ಮನದಿಂದ ಒಣಮೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:22
12 ತಿಳಿವುಗಳ ಹೋಲಿಕೆ  

ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.


ಕಳವಳವು ಮನಸ್ಸನ್ನು ಕುಗ್ಗಿಸುವದು; ಕನಿಕರದ ಮಾತು ಅದನ್ನು ಹಿಗ್ಗಿಸುವದು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಸವಿನುಡಿಯು ಜೇನುಕೊಡ; ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.


ನಗೆಯು ಹುಚ್ಚುತನ, ಸಂತೋಷದಿಂದೇನು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು