Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:27 - ಕನ್ನಡ ಸತ್ಯವೇದವು J.V. (BSI)

27 ಹಿಡಿದು ಮಾತಾಡುವವನು ಜ್ಞಾನಿ. ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:27
8 ತಿಳಿವುಗಳ ಹೋಲಿಕೆ  

ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.


ಹುಚ್ಚರೊಡೆಯನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಅಂಟುತ್ತವೆ.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು