Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:5 - ಕನ್ನಡ ಸತ್ಯವೇದವು J.V. (BSI)

5 ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:5
13 ತಿಳಿವುಗಳ ಹೋಲಿಕೆ  

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.


ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು