Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:9 - ಕನ್ನಡ ಸತ್ಯವೇದವು J.V. (BSI)

9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:9
7 ತಿಳಿವುಗಳ ಹೋಲಿಕೆ  

ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ.


ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು