Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:13 - ಕನ್ನಡ ಸತ್ಯವೇದವು J.V. (BSI)

13 ಗಮನಿಸದೆ ಉತ್ತರಕೊಡುವವನು ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:13
11 ತಿಳಿವುಗಳ ಹೋಲಿಕೆ  

ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯವು ಇಸ್ರಾಯೇಲ್ಯರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ


ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.


ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು.


ರಾಜನಾದ ದಾರ್ಯಾವೆಷನು ಈ ನಿಬಂಧನಶಾಸನಕ್ಕೆ ರುಜುಹಾಕಿದನು.


ಆಗ ಅರಸನು - ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ ಎಂದು ಹೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು