Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:3 - ಕನ್ನಡ ಸತ್ಯವೇದವು J.V. (BSI)

3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಕೇಡುಮಾಡಿದರೆ ಜನರು ನಿನ್ನನ್ನು ಇಷ್ಟಪಡುವುದಿಲ್ಲ; ನಾಚಿಕೆಕರವಾದದ್ದನ್ನು ಮಾಡಿದರೆ ನಿನ್ನನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:3
14 ತಿಳಿವುಗಳ ಹೋಲಿಕೆ  

ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ದುಷ್ಟರ ವೃದ್ಧಿ ಪಾಪವೃದ್ಧಿ; ಶಿಷ್ಟರೋ ಅವರ ಪತನವನ್ನು ಕಣ್ಣಾರೆ ನೋಡುವರು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.


ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನಮ್ಮ ದೇವರೇ ಕೇಳು; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆ ಹೋಗುವಂತೆ ಮಾಡು.


ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.


ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ.


ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.


ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು