Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:5 - ಕನ್ನಡ ಸತ್ಯವೇದವು J.V. (BSI)

5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:5
20 ತಿಳಿವುಗಳ ಹೋಲಿಕೆ  

ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಪಕ್ಷಪಾತವು ಅಧರ್ಮ; ತುತ್ತನ್ನಕ್ಕಾಗಿ ಜನರು ದ್ರೋಹಮಾಡುವದುಂಟು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ.


ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ಶಿಷ್ಟನಿಗೆ ದಂಡ ಅಯುಕ್ತ; ಧರ್ಮಿಷ್ಟನಿಗೆ ಪೆಟ್ಟು ಅಧರ್ಮ.


ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತು ಬಿಟ್ಟು ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸ ಮಾಡುವರು.


ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,


ಅದಲ್ಲದೆ ಬಡವನನ್ನು ಕರುಣಿಸಿ ಪಕ್ಷಪಾತದಿಂದ ತೀರ್ಮಾನ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು