Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:6 - ಕನ್ನಡ ಸತ್ಯವೇದವು J.V. (BSI)

6 ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:6
14 ತಿಳಿವುಗಳ ಹೋಲಿಕೆ  

ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.


ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.


ವ್ಯಾಜ್ಯಕ್ಕೆ ದೂರನು ಮಾನಕ್ಕೆ ಯೋಗ್ಯನು; ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು