Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:7 - ಕನ್ನಡ ಸತ್ಯವೇದವು J.V. (BSI)

7 ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:7
16 ತಿಳಿವುಗಳ ಹೋಲಿಕೆ  

ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಜ್ಞಾನಹೃದಯನು ಆಜ್ಞೆಗಳನ್ನು ವಹಿಸುವನು; ಹರಟೆಯ ಮೂರ್ಖನು ಕೆಡವಲ್ಪಡುವನು.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಹೊಟ್ಟೆಯೊಳಕ್ಕೇ ಇಳಿಯುವವು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು