Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:8 - ಕನ್ನಡ ಸತ್ಯವೇದವು J.V. (BSI)

8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಹೊಟ್ಟೆಯೊಳಕ್ಕೇ ಇಳಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರಿಗೆ ಹರಟೆಮಾತನ್ನು ಕೇಳಲು ಇಷ್ಟ. ಹರಟೆ ಮಾತುಗಳು ರುಚಿಕರವಾದ ಆಹಾರದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:8
8 ತಿಳಿವುಗಳ ಹೋಲಿಕೆ  

ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು