Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:10 - ಕನ್ನಡ ಸತ್ಯವೇದವು J.V. (BSI)

10 ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:10
17 ತಿಳಿವುಗಳ ಹೋಲಿಕೆ  

ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ; ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು