Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:11 - ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:11
19 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ವ್ಯಾಜ್ಯಕ್ಕೆ ದೂರನು ಮಾನಕ್ಕೆ ಯೋಗ್ಯನು; ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು;


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ದಮಸ್ಕದ ಅಬಾನಾ, ಪರ್ಪರ್ ಎಂಬ ಹೊಳೆಗಳು ಇಸ್ರಾಯೇಲ್ಯರ ಎಲ್ಲಾ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ ಎಂದು ಹೇಳಿ ಬಲು ಸಿಟ್ಟಿನಿಂದ ಹೊರಟುಹೋದನು.


ಚಾಡಿಕೋರನು ಗುಟ್ಟು ರಟ್ಟುಮಾಡುವನು; ನಂಬಿಗಸ್ತನು ಸಂಗತಿಯನ್ನು ಗುಪ್ತಪಡಿಸುವನು.


ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು; ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು