Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:17 - ಕನ್ನಡ ಸತ್ಯವೇದವು J.V. (BSI)

17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:17
21 ತಿಳಿವುಗಳ ಹೋಲಿಕೆ  

ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.


ಬಾಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನನುಭವಿಸುವನು; ಅವನ ಕೈಕೆಲಸದ ಫಲವು ಅವನಿಗೇ ಪ್ರಾಪ್ತವಾಗುವದು.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.


ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತು ಬಂದರೆ ಅದನ್ನು ತರುವದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು