Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:26 - ಕನ್ನಡ ಸತ್ಯವೇದವು J.V. (BSI)

26 ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು ನಿಂದೆ ಅವಮಾನಗಳಿಗೆ ತುತ್ತಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಂದೆಗೆ ಹೊಡೆಯುವವನೂ ತಾಯಿಯನ್ನು ಓಡಿಸುವವನೂ ತನಗೇ ನಾಚಿಕೆಯನ್ನು ಮತ್ತು ಅವಮಾನವನ್ನು ತಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:26
14 ತಿಳಿವುಗಳ ಹೋಲಿಕೆ  

ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು