Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:3 - ಕನ್ನಡ ಸತ್ಯವೇದವು J.V. (BSI)

3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:3
21 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.


ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.


ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಮನುಷ್ಯನಿಗೆ ಜೀವವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವದೇಕೆ?


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು