Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:5 - ಕನ್ನಡ ಸತ್ಯವೇದವು J.V. (BSI)

5 ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:5
14 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯು ಅಳಿದುಹೋಗುವದು; ಕೇಳಿದ್ದದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವದು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.


ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ.


ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಜನಾಂಗಗಳನ್ನು ಉರುಳಿಸಿಬಿಡು.


ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಸತ್ಯಸಾಕ್ಷಿಯು ಪ್ರಾಣರಕ್ಷಕ; ಸುಳ್ಳುಸಾಕ್ಷಿಯು ವಂಚಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು